ಬುಧವಾರ, ಜೂನ್ 23, 2021

ಪ್ರಕಟಣೆ : ೨೦೨೧ ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ.

*೨೦೨೧ ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ* 

ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ 'ವಿಭಾ ಸಾಹಿತ್ಯ ಪ್ರಶಸ್ತಿ-೨೦೨೧' ಕ್ಕಾಗಿ ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಚುಟುಕು, ಹನಿಗವನಗಳು ಬೇಡ. ಈ ಪ್ರಶಸ್ತಿಯು ರೂ. ೧೦,೦೦೦/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ವಿನಂತಿಸಲಾಗಿದೆ.

ವಿ.ಸೂ; ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ ಮೂಲಕ ಕಳಿಸುವದಕ್ಕಿಂತ ಡಿಟಿಪಿ ಮಾಡಿದ ಹಸ್ತಪ್ರತಿ ಕಳಿಸಿಕೊಡಬೇಕು. ಬರವಣಿಗೆ ಮಾಡಿದ ಹಸ್ತಪ್ರತಿಯನ್ನೂ ಕಳಿಸಬಹುದು.

ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಜುಲೈ ೩೧.

ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ;

ಪ್ರಕಾಶ ಸುನಂದಾ ಕಡಮೆ
ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-೨೦೨೧
ನಂ. ೯೦, 'ನಾಗಸುಧೆ ಜಗಲಿ'
೬/ಬಿ ಕ್ರಾಸ್, ಕಾಳಿದಾಸನಗರ,
ವಿದ್ಯಾನಗರ ವಿಸ್ತೀರ್ಣ
ಹುಬ್ಬಳ್ಳಿ- ೫೮೦೦೩೧
ದೂರವಾಣಿ; ೯೮೪೫೭೭೯೩೮೭.

ಮಾನ್ಯ ಸಂಪಾದಕರಿಗೆ,
ಈ ಮೇಲಿನ ಸುದ್ದಿಯನ್ನು ದಯವಿಟ್ಟು ತಮ್ಮ ದಿನಪತ್ರಿಕೆ, ಬ್ಲಾಗ್ ಹಾಗೂ ಸುದ್ದಿ ಮಾದ್ಯಮಗಳ ರಾಜ್ಯಮಟ್ಟದ ವಿಭಾಗದಲ್ಲಿ ಪ್ರಕಟಿಸಿ, ಎಂದಿನಂತೆ ಸಹಕರಿಸಬೇಕಾಗಿ ವಿನಂತಿ.

ವಿಶ್ವಾಸದಿಂದ,

ಪ್ರಕಾಶ ಸುನಂದಾ ಕಡಮೆ,
ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-೨೦೨೧
ನಂ. ೯೦, 'ನಾಗಸುಧೆ ಜಗಲಿ' ೬/ಬಿ ಕ್ರಾಸ್,
ಕಾಳಿದಾಸನಗರ, ವಿದ್ಯಾನಗರ ವಿಸ್ತೀರ್ಣ, ಹುಬ್ಬಳ್ಳಿ-೫೮೦೦೩೧

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನೊಂದವಳು(ಸಣ್ಣಕಥೆ) - ಎಂ.‌ಆಶಾಕಿರಣ್

ಈ ಕಥಾನಾಯಕಿಯ ಹೆಸರು ಕುಸುಮ, ಇವಳು ಹಳ್ಳಿಯಲ್ಲಿ ಒಂದು ಬಡಕುಟುಂಬದಲ್ಲಿ ಜನಿಸುತ್ತಾಳೆ. ಇವಳ ತಂದೆಗೆ  ಗಂಡು ಮಗು ಬೇಕೆಂಬ ಹಂಬಲ, ಇದರ ಫಲವಾಗಿ ಇವನಿಗೆ ನಾಲ್ಕು ಹೆಣ್ಣುಮಕ...