ಗುರುವಾರ, ಅಕ್ಟೋಬರ್ 2, 2025

ಲೇಖನ

ಲೇಖನ

ಹಾಸ್ಯ ನಟ ಬಹುಮುಖ ಪ್ರತಿಭೆಯ
ಮೈಸೂರು ರಮಾನಂದ್ 
ಕರ್ನಾಟಕದ ರಂಗಭೂಮಿಯ ಪರಂಪರೆ ಕನ್ನಡಿಗರ ವಾಸ್ತವ ಬದುಕನ್ನು ಸಮರ್ಥವಾಗಿ ಪ್ರತಿನಿಧಿಸುತ್ತಲೇ ಬಂದಿದೆ. ಆಧ್ಯಾತ್ಮಿಕ, ಪೌರಾಣಿಕ, ಐತಿಹಾಸಿಕ, ಸಾಮಾಜಿಕ, ವಿಡಂಬನೆ, ಸಮಕಾಲೀನ ಸಮಸ್ಯೆ......ಹೀಗೆ ರಂಗಭೂಮಿಯಿಂದ ಆಗಿರುವ ಜೀವನಕ್ರಾಂತಿ ಬಹು ದೊಡ್ಡದು. ಜನಮಾನಸವನ್ನು ಈ ರೀತಿಯಾಗಿ ಸದಾ ಚಾಲನೆಯಲ್ಲಿ ಇರಿಸಿದ ದೃಷ್ಟಿಯಿಂದ ರಂಗಭೂಮಿಯನ್ನು ಜವಾಬ್ದಾರಿಯಿಂದ ಬೆಳಸಿದ ಮಹಾನ್ ಕಲಾವಿದರ ಪರಂಪರೆಗೆ ದೊಡ್ಡ ಗೌರವ ಸಲ್ಲಲೇಬೇಕಿದೆ. ಇಂತಹ ಮಹಾನ್ ರಂಗಕಲಾವಿದರಲ್ಲಿ ಸಮರ್ಪಣೆಯ ರಂಗ ಕಲಾವಿದ ಮೈಸೂರು ರಮಾನಂದ್ ಕೂಡ ಒಬ್ಬರು.

 ಸುಮಾರು 70 ವರ್ಷ ವಯಸ್ಸಿನ ಮೈಸೂರು ರಮಾನಂದ್ ಅವರು ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಜನಿಸಿದವರು. ನಾಡಿನ ಸಾಂಸ್ಕೃತಿಕ ಸೊಗಡನ್ನು ತಮ್ಮ ವ್ಯಕ್ತಿತ್ವದಲ್ಲಿ ಅಳವಡಿಸಿಕೊಂಡವರು. ನಿರಂತರ 50 ವರ್ಷಗಳಿಂದ ನಾಡಿನಾದ್ಯಂತ ಸಂಚರಿಸಿ ರಂಗಭೂಮಿಯಲ್ಲಿ ಬಹುಮುಖಿ ವೇಷಗಳಿಂದ, ಬಹುಮುಖ ಪ್ರತಿಭೆಯಿಂದ ಮೆರೆದವರು. ಬಹುವಿಭಾಗ ಸಿನಿಮಾ, ರಂಗ ನಿರ್ವಹಣೆಯಿಂದ ಕರ್ನಾಟಕ ರಮಾರಮಣರೆನಿಸಿದವರು. 

 ಕನ್ನಡದ ಹೆಮ್ಮೆಯ ವರನಟ 
ಡಾ.ರಾಜಕುಮಾರ್, 
ಡಾ.ಹಾ.ಮಾ.ನಾಯಕ್, 
 ಡಾ.ಬಿ.ವಿ.ಕಾರಂತ್ ಮೊದಲಾದ ದಿಗ್ಗಜರು ರಮಾನಂದರ ರಂಗಕಲೆಯ ಕಾಯಕವನ್ನು ಮೆಚ್ಚಿಕೊಂಡವರಾಗಿದ್ದಾರೆ.
  ನಾಡಿನ ಹಲವು ಪತ್ರಿಕೆಗಳು ಮೈಸೂರು ರಮಾನಂದರ 50 ವರ್ಷಗಳ ರಂಗ ಸೇವೆಯ ಬರಹ ಪ್ರಕಟಿಸಿವೆ. ನಾಡಿನ ರಂಗ ದಿಗ್ಗಜರು ಸಾಹಿತಿ ಕಲಾವಿದರು ರಮಾನಂದ ಅವರ ಪ್ರತಿಭಾ ಸಂಪನ್ನ ಸಾಧನೆಯನ್ನು ರಂಗ ಬೆನ್ನು ತಟ್ಟಿ ಉತ್ತೇಜಿಸಿದ್ದಾರೆ. ನಟ,ನಿರ್ದೇಶಕ, ರಚನಕಾರ, ಪ್ರಕಾಶಕ, ಗೆಜ್ಜೆ ಹೆಜ್ಜೆ ರಂಗ ತಂಡ ಸಂಸ್ಥಾಪಕ, ಪತ್ರಕರ್ತ, ಪ್ರಯೋಗ ಶೀಲ ನಾಟಕಕಾರ, ರಂಗ ಸಂಚಾರಿ... ಹೀಗೆ ವಿವಿಧ ಆಯಾಮಗಳ ಬಹುಮುಖಿ ಸಾಧಕ ಮೈಸೂರು ರಮಾನಂದರು. ಇವರು ಗೆಳೆಯರೊಂದಿಗೆ ಆರಂಭಿಸಿದ ವಾಸ್ತವ ಜೀವನದ ಸಮಸ್ಯೆಗಳು ಮತ್ತದರ ಪರಿಹಾರಗಳನ್ನು ತಿಳಿಸುವ ಬೀದಿ ನಾಟಕಗಳು ಸಾವಿರಕ್ಕೂ ಹೆಚ್ಚು ಪ್ರದರ್ಶನ ನೀಡಿ ದಾಖಲೆ ನಿರ್ಮಿಸಿದೆ. ರಂಗಭೂಮಿಯ ವಿಶ್ವ ಪ್ರಜ್ಞೆಯನ್ನು ಯಶಸ್ವಿಯಾಗಿ ಸಾರುತ್ತಿರುವ ಮೈಸೂರು ರಮಾನಂದ ಅವರು ಕ್ರಿಯಾಶೀಲತೆಯಲ್ಲಿ, ಸಾಮಾಜಿಕ ಕಳಕಳಿಯ ಬದ್ಧತೆಯಲ್ಲಿ ಸದಾ ಮುಂಚೂಣಿಯಲ್ಲಿರುವ ವ್ಯಕ್ತಿ. ಅವರು ರಂಗಭೂಮಿಯನ್ನು ವಾಸ್ತವ ಬದುಕಿನ ಸಮಸ್ಯೆಗಳ ಪರಿಹಾರದ ಕನ್ನಡಿಯಾಗಿ ದೂರದೃಷ್ಟಿ ಅವಲೋಕನ ಮೆಚ್ಚುವಂತದ್ದು, 
ಮೈಸೂರು ರಮಾನಂದರನ್ನು ಕಲಾವಿದರಾಗಿ ಸಂತೋಷದಿಂದ ಒಪ್ಪಿಕೊಳ್ಳುವ ಜೊತೆಗೆ ನಮ್ಮ ರಾಜ್ಯದ ಮಹಾನಂದ ಎಂದು ಬಾಚಿ ಅಪ್ಪಿಕೊಳ್ಳಬಹುದಾಗಿದೆ. 
ಇವರ ಕುರಿತಂತೆ ಕೆಲ ವರ್ಷಗಳ ಹಿಂದೆ ಅಭಿನಂದನಾ ಗ್ರಂಥ ಪ್ರಕಟವಾಗಿದೆ. ಅದರಲ್ಲಿ ನಾನು ಕೂಡ ಬರೆದಿರುವೆ. ಸರ್ಕಾರಿ ಕಚೇರಿಗಳ ಸಹಯೋಗದಲ್ಲಿ ಅವರು ಸರ್ಕಾರದ ಪ್ರಚಾರಾತ್ಮಕ ನೀತಿಗಳನ್ನು ಜನಸಾಮಾನ್ಯರಿಗೆ ತಮ್ಮದೇ ರಚನೆಯ ಬೀದಿ ನಾಟಕಗಳ ಮೂಲಕ ಅತ್ಯಂತ ಪರಿಣಾಮಕಾರಿಯಾಗಿ ತಲುಪಿಸಿದ್ದಾರೆ. 
 ವೈಯುಕ್ತಿಕವಾಗಿ ಸುಮಾರು 2 ದಶಕಗಳಿಂದ ಅವರು ನನಗೆ ಪರಿಚಿತರು. ಪ್ರೀತಿಯ ಒಡನಾಡಿ. ಮೈಸೂರು ರಮಾನಂದರ ಕಲಾ ಪರಿಚಯವನ್ನು ನಾನು ನಾಡಿನ ಕೆಲವು ಪತ್ರಿಕೆಗಳಲ್ಲಿ ಬರೆದಿರುವುದುಂಟು. ರಮಾನಂದ್ ರಂಗಭೂಮಿಯಲ್ಲಿ ತಾನು ಕಲಾವಿದನಾಗಿ ಬೆಳೆಯುವ ಜೊತೆಗೆ ತನ್ನ ಸಹ ಕಲಾವಿದರನ್ನು ಬೆಳೆಸಿದ್ದಾರೆ. ಕಲಾವಿದರ ಸಂಕಷ್ಟಗಳಿಗೆ ಮಿಡಿದು ಅವರನ್ನು ಸಹ ತನ್ನೊಂದಿಗೆ ಬೆಳೆಸಿದ ಹೃದಯ ಸಂಪನ್ನರು. ಇವರಿಗೆ ರಾಜ್ಯದ ರಾಜ್ಯೋತ್ಸವ ಪ್ರಶಸ್ತಿ ನಿಜಕ್ಕೂ ಸಲ್ಲಬೇಕಿದೆ. ಅದಕ್ಕೆ ಇವರು ನಿಜವಾಗಿಯೂ ಅರ್ಹರಿದ್ದಾರೆ.
ಮೊನ್ನೆ ಅವರು ಬೆಂಗಳೂರಿನ ನಾಗರಬಾವಿಯಲ್ಲಿ ಬಾಡಿಗೆ ಮನೆಯಲ್ಲಿರುವ ಮಗನ ಮನೆಗೆ ಬಂದಿದ್ದರು. .ಅವರ ರಂಗ ಸಾಧನೆಯ ಬೃಹತ್ ಫೈಲ್ ನ್ನು ತೋರಿಸಿದರು. ಇದನ್ನು ಆಯ್ಕೆ ಸಮಿತಿ ನೋಡಿ ಪ್ರಶಸ್ತಿಗೆ ಪರಿಗಣಿಸಬೇಕಿದೆ ಅಷ್ಟೇ.  
ರಂಗಭೂಮಿಯ ಅನುಭವದಿಂದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಅಲ್ಲಿಯೂ ಗುರುತರ ಪಾತ್ರಗಳಲ್ಲಿ ಗಮನಾರ್ಹ ಅಭಿನಯದಿಂದ ಮಿಂಚಿದವರು ಮೈಸೂರು ರಮಾನಂದರು. ಎಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೋ ತಿಳಿಯದು. ಇತ್ತೀಚಿಗೆ ಇವರೇ ಪ್ರದಾನ ಪಾತ್ರ ನಿರ್ವಹಿಸುತ್ತಿರುವ ಮಗ್ಗಿ ಪುಸ್ತಕ ಬಿಡುಗಡೆಯ ನಿರೀಕ್ಷಿಯಲ್ಲಿದೆ. ಮತ್ತೊಂದು ರನೊನಂದರ
ವಿಶೇಷವೆಂದರೆ ಇವರ ಮಗ ಮತ್ತು ಪತ್ನಿ ಸಹ ಕಲಾ ಬದುಕಿನಲ್ಲಿ ಇವರ ಜೊತೆಯಲ್ಲಿಯೇ ಸಾಗಿದ್ದಾರೆ.
ನಗು ಎಲ್ಲಿದೆಯೋ ಅಲ್ಲಿದೆ ಅರೋಗ್ಯ ಎನ್ನುವ ರಮಾನಂದರ ಸ್ಲೋಗನ್ ನಂತೆ ಇವರು ತಮ್ಮ ಬದುಕಿನ ಉದ್ದಕ್ಕೂ ಕಲಾ ರಸಿಕರನ್ನು ನಗಿಸುತ್ತಲೇ ಬಂದಿದ್ದಾರೆ.
   ----

ಗೊರೂರು ಅನಂತರಾಜು, ಹಾಸನ
9449462879
ವಿಳಾಸ: ಹುಣಸಿನಕೆರೆ ಬಡಾವಣೆ,
29ನೇ ವಾಡ್೯
3 ನೇ ಕ್ರಾಸ್, ಹಾಸನ - 573201.

ವರದಿ

ವರದಿ

ಬದುಕು 'ಹಾವು-ಏಣಿಯಾಟ ಜಯಪ್ಪ ಹೊನ್ನಾಳಿ


ಬದುಕು ಹಾವು ಏಣಿಯಾಟ, ಅದರಲ್ಲಿ ದುರಾಸೆ, ದುಃಖ, ಜಾತಿ, ಮತ, ಕುಲ, ಧರ್ಮಗಳೆಂಬ ವಿಷಕಾರುವ ಹಾವುಗಳು ಜಾಸ್ತಿ, 'ಬುದ್ಧ-ಬಸವ-ಅಂಬೇಡ್ಕರ್' ಮುಂತಾದವರಿಲ್ಲಿ ಏಣಿಗಳು, ಆ ಏಣಿಗಳನ್ನು ಹಿಡಿದುಕೊಂಡು ನಾವು ಮೇಲೇರಬೇಕಾಗಿದೆ, ಅದರಲ್ಲೂ ಮುಖ್ಯವಾಗಿ ನಾವು ಅಂದರೆ ಬರೆವಣಿಗೆಯಲ್ಲಿ ತೊಡಗಿಸಿಕೊಂಡವರು, ಬರೆಯದ ಸಾವಿರಾರು ಜನರ ಪ್ರತಿನಿಧಿಗಳಾಗಿ,
ಜಾತ್ಯತೀತರಾಗಿ ಜಗತ್ತಿಗೆ ಆದರ್ಶವಾಗಬೇಕಾಗಿದೆ, ಮತಾತೀತನಾಗದವನು, ಕುಲಾತೀತನಾಗದವನು ಎಂದಿಗೂ ಕವಿಯಾಗಲಾರ, ಮಮತೆ ಸಮತೆಗಳ ತನ್ನೆರಡೂ ಕಣ್ಣಾಗಿಸಿಕೊಂಡವ ಮಾತ್ರ ಕವಿಯಾಗಲು ಸಾಧ್ಯ, ರಾಜಕಾರಣಿಗಳ, ಮಂತ್ರಿ ಮಹೋದಯರ ಶಿಫಾರಸ್ಸಿನಿಂದ ಯಾರೇ ಕವಿಗೋಷ್ಠಿಯ ವೇದಿಕೆಗಳನ್ನೇರಿದರೂ, ಸಹೃದಯರೆದೆಯ ಸಿಂಹಾಸನವನ್ನೇರುವುದು ಅಸಾಧ್ಯ, ಕವಿತೆಯೇ ಕವಿಯನ್ನು ಶಿಫಾರಸ್ಸು ಮಾಡಿದರೆ ಮಾತ್ರ ಸಹೃದಯರೆದೆಯ ಸಿಂಹಾಸನನ್ನು ಪಂಪ-ಕುಮಾರವ್ಯಾಸ-ಕುವೆಂಪು-ಬೇಂದ್ರೆಯವರಂತೆ ಏರಬಹುದು, ಇದನ್ನು ಇಂದಿನ ಬಹುಪಾಲು ಬರೆಹಗಾರರು ಮರೆತಿರುವುದು ಖೇದಕರ ಸಂಗತಿ ಎಂದು ಕವಿ ಡಾ. ಜಯಪ್ಪ ಹೊನ್ನಾಳಿ ಹೇಳಿದರು.

   ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ ಮೈಸೂರು ಜಿಲ್ಲಾ ಘಟಕದಿಂದ ಹಾರ್ಡ್ವೀಕ್ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ *ದಸರಾ ಕವಿಗೋಷ್ಠಿ* ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತಾಡಿದ ಅವರು, ವಿಶ್ವಪ್ರಜ್ಞೆ ಕವಿಗಳದಾಗಬೇಕು, ಅವರು ಶಾಶ್ವತ ಸಾಂಸ್ಕೃತಿಕ ಶಾಸಕರು ತಾವೆಂಬುದನ್ನೆಂದಿಗೂ ಮರೆಯಬಾರದು ಎಂದರು.

ಅಧ್ಯಕ್ಷತೆ ವಹಿಸಿದ್ದ ಕವಯತ್ರಿ ಹೇಮಗಂಗಾ ಮಾತನಾಡಿ, ಭಾಷಾ ಶುದ್ಧಿ ಕವಿಗಳಿಗೆ ಬಹುಮುಖ್ಯ, ಭಾಷೆಯ ಮೇಲೆ ಪ್ರಭುತ್ವವಿಲ್ಲದಿರೆ ಉತ್ತಮ ಸಾಹಿತ್ಯ ಸೃಷ್ಟಿಸಲು ಸಾಧ್ಯವಿಲ್ಲ, ಪ್ರೌಢವಾದ ಭಾಷಾ ಸಂಪನ್ನತೆಯನ್ನು ಕವಿಗಳು ಎಲ್ಲಕ್ಕೂ ಮೊದಲು ತಮ್ಮದಾಗಿಸಿಕೊಳ್ಳಬೇಕು ಎಂದರು.

ವೇದಿಕೆಯ ಮೈಸೂರು ಜಿಲ್ಲಾಧ್ಯಕ್ಷೆ ಶ್ರೀ ಮತಿ ಇಂದಿರಾ ವಸಂತ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮೀರಾ ಕೇಸರ್ಕರ್ ಎಲ್ಲರನ್ನೂ ಸ್ವಾಗತಿಸಿದರು. ಸ್ಮಿತಾ ಹೇಮೇಶ್ ಪ್ರಾರ್ಥನೆ ಹಾಗೂ ಕುಮಾರಿ ಪರಿಣಿತ ಹಚ್ಚೇವು ಕನ್ನಡದ ದೀಪ ದೀಪಾರತಿಯ ಅಮೋಘ ನೃತ್ಯ ದೊಂದಿಗೆ ಎಲ್ಲರನ್ನು ರಂಜಿಸಿ ಮೆಚ್ಚುಗೆಗೆ ಪಾತ್ರರಾದರು. 
ಮುಖ್ಯ ಅತಿಥಿಗಳಾಗಿ ಎಂ ಶಿವಸ್ವಾಮಿ, ಶೈಲಜಾ ಹಾಸನ, ರಾಜೇಶ್ವರಿ ಹುಲ್ಲೇನಳ್ಳಿ, ರಾಘವೇಂದ್ರ, ಶಿವಕುಮಾರ್, ಬಿಡಿಎಂ ಕುಮಾರ್, ಹಿರಿಯ ಕವಿಗಳಾದ ಎನ್. ಎಲ್. ಚನ್ನೇಗೌಡ, ಗೊರೂರು ಅನಂತ ರಾಜು, ಶೀಲಾ ಭಟ್ ಇದ್ದು ಕವಿತೆ ವಾಚಿಸಿದರು. 20ಕ್ಕೂ ಹೆಚ್ಚು ಕವಿಗಳು ಕವನ ವಾಚಿಸಿದರು. ಪುಷ್ಪಲತಾ ನಾರಾಯಣ್, ಮಂಜುಳ ಜಾದವ್ ನಿರ್ವಹಿಸಿದರು. 
ಮನೋಜ್ ಕುಮಾರ್, ಅನಿಲ್ ಕುಮಾರ್ ನಿರೂಪಿಸಿದರು. ವೇದಿಕೆಯ ಸಂಸ್ಥಾಪಕ ಅಧ್ಯಕ್ಷೆ ಕಲಾವತಿ ಮಧುಸೂದನ್ ಪ್ರಾಸಂಗಿಕವಾಗಿ ಮಾತನಾಡುತ್ತ ವೇದಿಕೆಯ ಧ್ಯೇಯೋದ್ದೇಶಗಳನ್ನು ತಿಳಿಸಿ, ವೇದಿಕೆ ಮುನ್ನೆಡೆಸಲು ಸರ್ವರ ಸಹಕಾರ ಕೋರಿದರು. ಮತ್ತು ಕಾರ್ಯಕ್ರಮದ ಕಡೆಯಲ್ಲಿ ವಂದನಾರ್ಪಣೆ ಮಾಡಿದರು.

ಲೇಖನ...

ಲೇಖನ 

ನಮ್ಮ ಊರು ಹಾಸನ ಶಿಲ್ಪಕಲೆಯ ಶಾಸನ 
ಗಾಯಕ ಆರ್. ರಾಮಶಂಕರಬಾಬು


 ಮಾತನಾಡುವಾಗ ಉಗ್ಗುವಿಕೆಯ ತೊಂದರೆಯಿಂದ ತೊದಲುವ ವ್ಯಕ್ತಿ ಹಾಡುವಾಗ ಸುಲಲಿತವಾಗಿ ಹಾಡುತ್ತಾರೆ ಎಂದರೆ ಈ ಸಾಧನೆಯ ಹಿಂದೆ ದೃಢ ಸಂಕಲ್ಪ ಮೇಳೈಸಿದೆ ಎನ್ನಬಹುದು. ತನ್ನ ಉಗ್ಗುವಿಕೆಯ ತೊಂದರೆಗೆ ಹಾಡುಗಾರಿಕೆಯಿಂದ ಪರಿಹಾರ ಕಂಡುಕೊಂಡ ಹಾಸನದ ಆರ್. ರಾಮಶಂಕರಬಾಬು ಜಿಲ್ಲೆಯ ಪ್ರತಿಭಾನ್ವಿತ ಗಾಯಕರು. ಉಗ್ಗು ಇದ್ದರೂ ಹಾಡಿ ಹಿಗ್ಗುವ ಮುಖೇನ ತಮ್ಮ ಬಾಳಿನ ನೋವು ಮರೆಯುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ಉಗ್ಗುವಿಕೆ ತೊಂದರೆಯಿಂದ ಮಾತನಾಡಲು ಕಷ್ಟಪಡುತ್ತಿದ್ದ ಬಾಬು ಛಲ ಮತ್ತು ದೃಢಚಿತ್ತದಿಂದ ಹಾಡುವುದನ್ನು ಅಭ್ಯಾಸ ಮಾಡಿಕೊಂಡವರಾಗಿದ್ದರು. ಜಾನಪದ ಹಾಡುಗಳನ್ನು ಹಾಡುವುದರ ಜೊತೆಗೆ ಕಂಜರ ಬಾರಿಸುವುದನ್ನು ರೂಢಿಸಿಕೊಂಡಿದ್ದರು. ಹೆಚ್ಚು ಹೆಚ್ಚು ಆತ್ಮವಿಶ್ವಾಸದಿಂದ ಹಾಡುಗಾರಿಕೆ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಗೆದ್ದವರು. ಗಾನ ಸೌರಭ, ಸಂಗೀತ ಗಂಗಾ ಎಂಬ ಹೆಸರಿನಲ್ಲಿ ಆರ್ಕೆಸ್ಟ್ರಾ ತಂಡ ಕಟ್ಟಿಕೊಂಡು ಗಣೇಶೋತ್ಸವ, ರಾಜ್ಯೋತ್ಸವ, ಮದುವೆ ಸಮಾರಂಭಗಳಲ್ಲಿ ಹಾಡುತ್ತಿದ್ದರು. 
 ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜನೆಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ ನೀಡಿದ್ದರು. ಹಾಸನ ಆಕಾಶವಾಣಿಯಲ್ಲಿ ತತ್ವಪದ ಗಾಯಕರಾಗಿ ಹಾಡಿದ್ದರು. ಸಾಮಾಜಿಕ ಜನಜಾಗೃತಿಯ ಕಾರ್ಯಕ್ರಮಗಳಲ್ಲಿ ಅವಕಾಶ ಸಿಕ್ಕಾಗ ತಮ್ಮೆಲ್ಲಾ ಕಾರ್ಯಗಳನ್ನು ಬದಿಗೊತ್ತಿ ಭಾಗವಹಿಸುತ್ತಿದ್ದರು. ಸರ್ಕಾರಿ ಪ್ರಾಯೋಜಿತ ಜನಜಾಗೃತಿ ಕಾರ್ಯಕ್ರಮ ಅದು ಆರೋಗ್ಯ ನೈರ್ಮಲ್ಯ ವಿಚಾರವಿರಲಿ, ಕುಡಿತದ ವ್ಯಸನ, ರಸ್ತೆ ಸುರಕ್ಷತೆ ಕೌಟುಂಬಿಕ ಸಾಮರಸ್ಯ ಹೀಗೆ ಎಂತಹದೇ ವಿಷಯದ ವಿಚಾರ ಇರಲಿ ಅದಕ್ಕೆ ಸ್ಥಳದಲ್ಲೇ ರಾಗ ತಾಳ ಮೇಳೈಸಿ ಹಾಡುವ ಸಾಮಾರ್ಥ್ಯ ಅವರಲ್ಲಿತ್ತು. ಅಂದಿನ ದಿನಗಳಲ್ಲಿ ನಾನು ಗೊರೂರಿನಲ್ಲಿ ಕಟ್ಟಿ ಬೆಳೆಸಿದ್ದ ಕನ್ನಡ ಕಲಾ ಸಾಹಿತ್ಯ ವೇದಿಕೆ ವೃಂದ ಜಿಲ್ಲೆಯ ನಾಟಕ ಸ್ಫರ್ಧೆಗಳಲ್ಲಿ ಹಾಸನ ಜಾತ್ರೆ, ಹೊಳೆನರಸೀಪುರ ಸಕಲೇಶಪುರ ಜಾತ್ರೆ, ಗಣೇಶೋತ್ಸವಗಳಲ್ಲಿ ನಮ್ಮ ನಾಟಕ ತಂಡದ ಹಿನ್ನೆಲೆ ಗಾಯಕರಾಗಿ ಬರುತ್ತಿದ್ದರು, ಹಾಡುತ್ತಿದ್ದರು. ನಾಟಕಕ್ಕೆ ಜನ ಸೇರಿಸಲು ಮೊದಲಿಗೆ ಬಾಬು ಅವರಿಗೆ ಹಾಡಲು ಅವಕಾಶ ನೀಡುತ್ತಿದ್ದೆ. ಅವರು ನನ್ನ ಊರು ಹಾಸನ ಶಿಲ್ಪಕಲೆಯ ಶಾಸನ ತಾವೇ ರಚಿಸಿದ್ದ ಈ ಹಾಡನ್ನು ಸಾವಿರಾರು ವೇದಿಕೆಗಳಲ್ಲಿ ಹಾಡಿದ್ದಾರೆ. ಈ ಗೀತೆ ನಮ್ಮ ನಾಟಕಕ್ಕೂ ಮೊದಲು ನಾವು ಮೇಕಪ್ ಮಾಡಿಕೊಳ್ಳಲು ಸಮಯ ಸಿಗಲು ಅನುಕೂಲವಾಗುತ್ತಿತ್ತು. ಮತ್ತು ನಾಟಕ ಆರಂಭಗೊಂಡಿರಬೇಕು ಎಂದು ಭಾವಿಸಿ ಜನ ಧಾವಿಸಿ 
ಬರುತ್ತಿದ್ದರು. ಇನ್ನು ನಮ್ಮ ಹುಡುಗರು ಬಸ್ಸಿನಿಂದ ಇಳಿದ ಕೂಡಲೇ ಅಲ್ಲಿ ಇಲ್ಲಿ ಚೆಲ್ಲಾಪಿಲ್ಲಿಯಾಗಿ ಜಾತ್ರೆ ಮಾಳ ಸುತ್ತುವ ಕೆಟ್ಟ ಚಾಳಿ ಬೆಳೆಸಿಕೊಂಡಿದ್ದರು. ಆಗ ಬಾಬು ಅವರ ಕಂಚಿನ ಕಂಠದಿoದ ಬಾಬು ಮೈಕಿನಲ್ಲಿ ಹಾಡುತ್ತಿದ್ದನ್ನು ಕೇಳಿಸಿಕೊಂಡು ಆಗ ಕಲಾವಿದರು ನಿಧಾನವಾಗಿ ಬಂದು ಸಾರಿ ಸಾರ್,. ಎಂದು ಪರದೆ ಹಿಂದೆ ಸರಿಯುತ್ತಿದ್ದರು. ಈ ಅನುಭವ ಹಿನ್ನಲೆಯಲ್ಲೇ ನಾನು ತೋಳ ಬಂತು ತೋಳ ಬರೆದು ನಾಟಕವಾಡಿಸಿ ಅದೀಗ ಪುಸ್ತಕವಾಗಿ ಓದುಗರ ಕ್ಕೆ ಸೇರಿದೆ. ಇಂದು ಕಾಮಿಡಿ ಕಿಲಾಡಿಗಳು ವಿನ್ನರ್ ಆಗಿರುವ ಕೆ.ಆರ್.ಪೇಟೆ ಶಿವರಾಜ್ ಅಂದು ನಮ್ಮ ತಂಡದ ನಟನಾಗಿ ರಂಗದ ಮೇಲೆ ಬಂದಾಗ ಆಗಿನ್ನು ಕಾಲೇಜು ವಿದ್ಯಾರ್ಥಿ. ಬಾಬು ಅವರು ನನ್ನ ಕವನಗಳಿಗೆ ರಾಗ ಕಟ್ಟಿ ವೇದಿಕೆಗಳಲ್ಲಿ ಹಾಡಿದ್ದಾರೆ. ಇವರು ವೇದಿಕೆಯಲ್ಲಿ ಏಕಪಾತ್ರಾಭಿನಯವನ್ನು ಮಾಡಿ ಜನರನ್ನು ರಂಜಿಸಿದ್ದಾರೆ. ಅನೇಕ ನಾಟಕಗಳಿಗೆ ಹಿನ್ನೆಲೆ ಗಾಯಕರಾಗಿ ಹಾಡಿರುವ ಇವರಿಗೆ ಕುಂಟುನಾಯಿ, ವ್ಯವಸ್ಥೆ, ಆತ್ಮ ಯಾವ ಕುಲ ಜೀವ ಕುಲ ನಾಟಕಗಳು ಹೆಸರು ತಂದಿದ್ದವು. 
 ವಾರ್ತಾ ಇಲಾಖೆ ಆರೋಗ್ಯ ಇಲಾಖೆಗಳು ಹಮ್ಮಿಕೊಂಡ ಜನಜಾಗೃತಿ ಕಾರ್ಯಕ್ರಮಗಳಲ್ಲಿ ಸಾಕ್ಷರತಾ ಆಂದೋಲನದ ಕಲಾಜಾಥದಲ್ಲಿ ಪಾಲ್ಗೊಂಡು ಬಾಬು ದಮಡಿ ಬಾರಿಸಿಕೊಂಡು ಹಾಡಿದ್ದಾರೆ. ಇವರ ಕಲಾ ಪ್ರತಿಭೆ ಗುರುತಿಸಿ ಜಿಲ್ಲೆಯ ಸಂಘ ಸಂಸ್ಥೆಗಳು ಸನ್ಮಾನಿಸಿ ಗೌರವಿಸಿವೆ. ಆದರೆ ಇಂತಹ ಮಹಾನ್ ಕಲಾವಿದನಿಗೆ ಹಾಸನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಕಡೆಗೂ ಸಿಗದೇ ಇದ್ದಿದ್ದು ವಿಷಾದನೀಯ. ಈ ಬಗ್ಗೆ ಅಷ್ಟಾಗಿ ಆಸಕ್ತಿ ತೋರದ ಬಾಬು ಮುಂದಿನ ವರ್ಷ ನೋಡೋಣ ಬಿಡಿ ಅನಂತರಾಜು ಎಂದು ನಿರಾಸೆಯಿಂದಲೇ ಹೇಳುತ್ತಿದ್ದರು. ಎರಡು ವರ್ಷದ ಹಿಂದೆ ಅರ್ಜಿ ಹಾಕಿದ್ದರು. ಪ್ರಶಸ್ತಿ ಸಿಗದೆ ನಿರಾಶರಾಗಿದ್ದರು. ಕಲಾವಿದರ ಮಾಶಸನಕ್ಕೂ ಅರ್ಜಿ ಹಾಕಲಾಗಲಿಲ್ಲ. ಜನ್ಮ ದಿನಾಂಕ ಪ್ರಮಾಣ ಪತ್ರ (ಡೇಟ್ ಆಫ್ ಬರ್ತ್ ಫಿಕೇಟ್ ) ಬೇಕಾಗಿತ್ತು ಎ೦ದು ಕಾಣುತ್ತದೆ. ಅದು ಅವರಲ್ಲಿ ಇರಲಿಲ್ಲವೇನೋ. ಅದಕ್ಕಾಗಿ ಅವರು ಅನಂತರಾಜು, ನೀವು ನನ್ನ ಪರಿಚಯ ಲೇಖನ ಪ್ರಜಾವಾಣಿ ದಿನಪತ್ರಿಕೆಯಲ್ಲಿ ಬರೆದಿದ್ದಿರಲ್ಲಾ ಅದರ ಕಟಿಂಗ್ಸ್ ನಿಮ್ಮ ಫೈಲ್ ನಲ್ಲಿ ಇದ್ದರೆ ಹುಡುಕಿಕೊಡಿ ಎಂದರು. ನಾನು ಸಾಮಾನ್ಯವಾಗಿ ಕಲಾವಿದರ ಪರಿಚಯ ಲೇಖನ ಬರೆಯುವಾಗ ಅವರ ಜನ್ಮ ದಿನಾಂಕ ಕೇಳಿ ದಾಖಲಿಸುತ್ತಿದ್ದೆ. ಕೆಲವರಿಗೆ ಅವರ ಹುಟ್ಟಿದ ದಿನಾಂಕವೇ ಗೊತ್ತಿರುವುದಿಲ್ಲ. ಈಗಿನಂತೆ ಶಾಲೆಗೆ ಮಕ್ಕಳನ್ನು ಸೇರಿಸುವಾಗ ಆಸ್ಪತ್ರೆ, ನಗರಸಭೆಯಿಂದ ಪಡೆದ ಜನನ ಪ್ರಮಾಣ ಕೂಡಲೇಬೇಕೆಂಬ ಕಡ್ಡಾಯವಿರಲಿಲ್ಲ. ಇದಕ್ಕೆ ಉದಾಹರಣೆ ಹೇಳಬೇಕೆಂದರೆ ಸಾಹಿತಿಗಳು ನಮ್ಮ ಚಿಕ್ಕಪ್ಪನವರು ಆದ ಗೊರೂರು ಸೋಮಶೇಖರ್ ತಮ್ಮ ಆತ್ಮಕಥೆ ಪುಸ್ತಕ ಗೊರೂರು ನೆನಪುಗಳಲ್ಲಿ ಬರೆದಿದ್ದಾರೆ. 
ಮಹಾಲಯ ಅಮಾವಾಸೆಯ ದಿನ ಹಬ್ಬ ಮುಗಿಸಿ ನಾನು ನನ್ನ ಸಹೋದರ ಲೇಖಕ ನಿವೃತ್ತ ಉಪನ್ಯಾಸಕ ಗೊರೂರು ಶಿವೇಶ್ ಸಂಜೆ ಎಲೆ ಅಡಿಕೆ ತಿನ್ನುತ್ತಾ ಸಾಹಿತ್ಯ ಪರಿಷತ್ತು ಚುನಾವಣೆ, ನಾಟಕ ವಿಚಾರವಾಗಿ ಮಾತನಾಡುತ್ತಾ ಬಾಬು ವಿಷಯ ಮಧ್ಯೆ ಬಂತು. ಆಗಲೇ ನಾನು ಬಾಬು ಅವರಿಗೆ ಈ ಬಾರಿ ಅರ್ಜಿ ಹಾಕಿ ಬಾಬು ಎಂದು ಮೆಸೇಜ್ ಮಾಡಿದ್ದೆ. ಮಾರನೇ ದಿನ ಬೆಳಿಗ್ಗೆ ಕಾದಂಬರಿಗಾರ್ತಿ ಶ್ರೀಮತಿ ಶೈಲಜಾ ಸುರೇಶ್ ಮೇಡಂ ಬಾಬು ನಿಧನ ಸುದ್ಧಿ ವ್ಯಾಟ್ಸಪ್ ಮಾಡಿದ್ದರು. ಇದು ಆ ಕ್ಷಣಕ್ಕೆ ನನಗೆ ಶಾಕಿಂಗ್ ನ್ಯೂಸ್. ಆಗ ನಮ್ಮ ವಾರ್ಡಿನ ಕಸದ ಗಾಡಿ ನಮ್ಮ ಮನೆ ಕಡೆ ಬರುತ್ತಿರಲು ಆ ಗಾಡಿಯ ಮೈಕಿನಿಂದ ಬಾಬು ಅವರ ಜನಪ್ರಿಯ ಹಾಡು ನನ್ನ ಊರು ಹಾಸನ ಶಿಲ್ಪ ಕಲೆಯ ಶಾಸನ ಕೇಳಿ ಬರುತ್ತಿತ್ತು. ಈ ಹಾಡು ಮಲಗಿದ್ದ ನಮ್ಮನ್ನು ಹಿಂದೆಲ್ಲಾ ಬಡಿದೆಬ್ಬಿಸುತ್ತಿತ್ತು. ಬಾಬು ಈ ಆಡಿಯೋ ಎಲ್ಲಿ ಮಾಡಿಸಿದ್ದೀರಿ ಎಂದು ಹಿಂದೊಮ್ಮೆ ಕೇಳಿದ್ದೆ. ಅನಂತರಾಜು, ನಿಜವಾಗಿಯೂ ಈ ಹಾಡು ನಾನು ಹಾಡಿದ್ದಲ್ಲ ಗಾಯಕ ಭಾನುಮೋಶ್ರೀಯವರು ಹಾಡಿದ್ದು ಎಂದಿದ್ದರು. ಬಾಬು ಅವರದೇ ಸ್ವರ ಸಾಮಾರ್ಥ್ಯದಲ್ಲಿ ಈ ಹಾಡನ್ನು ಮ್ಯೂಸಿಕ್ ಸಂಗಾತ್ಯದಲ್ಲಿ ರೆಕಾರ್ಡ್ ಮಾಡಿ ಭಾನುಮೋಶ್ರಿ ಯೂ ಟ್ಯೂಬ್ ನಲ್ಲಿ ಹಾಕಿದ್ದರು ಎಂದು ಕಾಣುತ್ತದೆ.ಅದನ್ನು ಗೊರೂರು ಶಿವೇಶ್ ಯೂ ಟ್ಯೂಬ್‌ನಿಂದ ತೆಗೆದು ಗ್ರೂಪ್ ಗೆ ಕಳಿಸಿದರು. ಹಾಡು ಕೇಳುತ್ತಾ ಹಾಗೆಯೇ ಕಣ್ಣಂಚಿನಲ್ಲಿ ನೀರು ಧುಮುಕದೆ ಹಾಗೆ ನಿಂತಿತ್ತು. 

ಗೊರೂರು ಅನಂತರಾಜು, ಹಾಸನ. 
ಮೊ:೯೪೪೯೪೬೨೮೭೯.
ವಿಳಾಸ: ಹುಣಸಿನಕೆರೆ ಬಡಾವಣೆ, 
೨೯ನೇ ವಾರ್ಡ್, ಶ್ರೀ ಶನೀಶ್ವರ ದೇವಸ್ಥಾನ ರಸ್ತೆ, ಹಾಸನ.

ಗಂಡ ಹೆಂಡತಿ ಜಗಳ ಉಂಡು ಮಲಗಿದ ಮೇಲೂ...

ಗಂಡ ಹೆಂಡತಿ ಜಗಳ ಉಂಡು ಮಲಗಿದ ಮೇಲೂ........

ಗಂಡ ಹೆಂಡತಿ ಜಗಳ ಉಂಡು ಮಲಗುವವರೆಗೂ ಎನ್ನುವ ಮಾತು ಬರಬರುತ್ತಾ ಗಂಡಹೆಂಡತಿ ಜಗಳ ಉಂಡು ಮಲಗಿದಿ ಮೇಲೂ ಎನ್ನುವಂತಾಗಿದೆ. ಹಾಗಂತ ನಾನು ನಮ್ಮ ಬಗ್ಗೆ ಹೇಳ್ತಾಯಿಲ್ಲ ಮಾಧ್ಯಮಗಳಲ್ಲಿ ಇತ್ತೀಚಿಗೆ ಪ್ರಸಾರವಾಗುತ್ತಿರುವ ವರದಿಗಳು ಮತ್ತು ನಮಗೆ ಗೊತ್ತಿರುವ ನಮ್ಮ ಸುತ್ತಲೂ ನಡೆಯುತ್ತಿರುವ ಘಟನೆಗಳು ಕಾರಣ.

ಗಂಡ ಹೆಂಡತಿಯ ಮಧ್ಯೆ ಜಗಳ ಸರ್ವೇ ಸಾಮಾನ್ಯ ಗಂಡನ ಜೊತೆ ಜಗಳ ಆಡದಿದ್ದರೆ ಕೆಲವು ಹಂಗಸರಿಗೆ ಊಟ ಅರಗಲ್ಲ. ಅದೇ ರೀತಿ ಹೆಂಡತಿ ಬೈಯದಿದ್ದರೆ ಗಂಡನಿಗೆ ಸಮಾಧಾನ ಇರಲ್ಲ ಅಂಥಹ ಪರಿಸ್ಥತಿಗೆ ಕೆಲವರು ತಲುಪಿ ಬಿಟ್ಟಿರುತ್ತಾರೆ‌ ಅಂದರೆ ಸಂಸಾರವೆಂಬ ಪರ್ವತದ ಪೀಕಿಗೆ ತಲುಪಿರುತ್ತಾರೆ. ಕೆಲವರು ಜಗಳವಾಡುತ್ತಲೇ ಮುಂಜಾನೆ ಎದ್ದರೂ ಅವರವರ ಕೆಲಸ ಸಾಗುತ್ತಲೇ ಜೊತೆಜೊತೆಯಲಿ ಜಗಳನೂ ಮುಂದುವರೆಸಿರುತ್ತಾರೆ ಹೆಂಡತಿ ಬೈಯುತ್ತಲೇ ಅಡುಗೆ ಮಾಡುತ್ತಾಳೆ ಬೈಯುತ್ತಲೇ ಊಟ ಬಡಿಸುತ್ತಾಳೆ. ಒಂದುವೇಳೆ ಅವಳೇನಾದರೂ ಬೈಯುವುದ ನಿಲ್ಲಿಸಿದರೆ ಗಂಡನಿಗೆ ಅನುಮಾನ ಬಂದು ಯಾಕೆ ಬೈಯುವುದ ನಿಲ್ಲಿಸಿದಳೆಂದು ಅಡುಗೆ ಮನೆಗೆ ಹೋಗಿ ನೋಡಿ ಯಾಕೆ ಏನಾಯಿತು ಸಮ್ನಾಗಿಬಿಟ್ಟೆ ಅಂದ್ರೆ ಆಕೆ ಅಳುತ್ತಿರುವುದನ್ನು ನೋಡಿ ಭಯಪಡುವುದು ಉಂಟು. ಆದರೆ ಗಂಡ ಹೆಂಡತಿಯ ಬೈಗುಳದ ಬಿರುಗಾಳಿಯ ಮಧ್ಯೆ ಸಿಕ್ಕು ಹಾರಿಹೋಗುತ್ತಿರುವಾಗ ಆಗಾಗ ಬದುಕಲು ಒಂದೋ ಎರಡೊ ಮೆದು ಮಾತಿನ ಆಸರೆ ಪಡೆಯಲು ಪ್ರಯತ್ನಿಸುತ್ತಾನೆ.ಇಷ್ಟೆಲ್ಲಾ ಆದಮೇಲೆ ಗಂಡ ಕೆಲಸಕ್ಕೆ ಹೋದಮೇಲೆ ಕೆಲವು ಹೆಂಗಸರು ತಕ್ಷಣ ಪಕ್ಕದ ಮನೆಯವರ ಜೊತೆ ಮಾತಿಗೆ ಜಾಯಿನ್ ಆಗಿ ನನ್ನ ಗಂಡ ನನ್ನ ತುಂಬಾ ಪ್ರೀತಿ ಮಾಡ್ತಾನೆ ಕರ್ಣಿ ಅಂದಾಗ ಅದು ಹೇಗೆ ಹೇಳ್ತಿರಾ ಅಂದ್ರೆ ನಾನು ಎಷ್ಟೇ ಬೈದರೂ ಮರು ಮಾತಾಡುವುದೇ ಇಲ್ಲ ಅಂತಾರೆ. 

ಇನ್ನೂ ಕೆಲವು ಹೆಂಡತಿಯರು ಗಂಡ ಹೋದಮೇಲೆ ಅಯ್ಯೋ ನಾನ್ಯಕೆ ಏನೇನೊ ಅಂದು ಬಿಟ್ಟೆ ಪಾಪ ಮನಸಿಗೆ ನೋವು ಮಾಡಿಕೊಂಡ್ರೋ ಏನೋ ಅಂತ ಆಫೀಸಿಗೆ ಹೋದ ಗಂಡನಿಗೆ ಫೋನ್ ಮಾಡಿ ರೀ.... ಸಾರಿರೀ...ಬೇಜಾರಾಯ್ತಾ...? 

ಇಲ್ವಲ್ಲ....ಯಾಕೆ ಏನಾಯ್ತು...? 

ನಾನು ನಿಮಗೆ ಹಾಗೆಲ್ಲ ಬೈಯಬಾರದಿತ್ತು ಸಾರಿರೀ..


ನೀನು ನನಗೆ ಬೈದಿಯಾ...?

ಹೌದು....

ನನಗೇನೂ ಕೇಳಿಸಲೇ ಇಲ್ಲ 

ಯಾಕೆ...?

ನಾನು ಬೆಳಿಗ್ಗೆ ಎದ್ದ ಕೂಡಲೇ ಏರ್ ಫೋನ್ ಹಾಕಿಕೊಳ್ಳುವ ಅಭ್ಯಾಸ ಆಗಿದೆ ಕಣೆ...ಅನ್ನೋದ

ಗಂಡ ಸಂಜೆ ಮನೆಗೆ ಬಂದು ಅರ್ದ ಗಂಟೆಯ ನಂತರ ಅಥವಾ ಬರುತ್ತಿದ್ದಂತೆಯೇ ಮತ್ತೆ ಜಗಳ ಈ ಜಗಳ ಮು.ಮಜಾನೆಯಿಂದ ರಾತ್ರಿ ಮಲಗಿದ ಮೇಲೂ ಕಂಟಿನ್ಯೂ ಆಗಿರತ್ತೆ...ಇದು ತಿಂಗಳಗಟ್ಟಲೆ ವರ್ಷಗಟ್ಟಲೇ ಜಗಳಾಡುತ್ತಲೇ ಮಕ್ಕಳಾಗ್ತಾವೆ ಜಗಳಾಡುತ್ತಲೇ ಮಕ್ಕಳನ್ನು ಬೆಳೆಸಿ ಒಳ್ಳೆಯ ಶಿಕ್ಷಣ ಕೊಡಿಸಿ ಮದುವೆ ಮಾಡಿ 

ನೋಡಮ್ಮ ನಾನು ನಿಮ್ಮ ತಂದೆ ಮೂವತ್ತು ವರ್ಷ ಸುಖ ಸಂಸಾರ ಮಾಡಿದ್ದೇವೆ ನೀನು ಕೂಡ ನಿನ್ನ ಗಂಡನ ಜೊತೆ ಹೀಗೆ ನೂರು ವರ್ಷ ಸುಖವಾಗಿ ಬಾಳು ಎಂದು ತಾಯಿ ಹೇಳಿದರೆ.  

ಗಂಡ ಅಳಿಯನಿಗೆ ಸಂಸಾರದಲ್ಲಿ ಸಾವಿರ ಬರತ್ತೆ ಸಾವಿರ ಹೋಗತ್ತೆ ಯಾವುದೇ ಕಾರಣಕ್ಕೂ ತಾಳ್ಮೆ ಕಳೆದುಕೊಳ್ಳಬೇಡಿ ನನ್ನ ನೋಡಿ ಕಲಿತು ಕೊಳ್ಳಿ ಎಂದು ಅಳಿಯನ ಕೈಗೆ ಏರ್ ಫೋನ್ ಕೊಟ್ಟಿದ್ದು.

ಕೆಲವರು ಜಗಳ ಆಡುವುದೇ ಇಲ್ಲ ಯಾಕೆ ಅಂದ್ರೆ ಗಂಡ ಬೈಸಿಕೊಳ್ಳಲು ಮತ್ತೊಬ್ಬರನ್ನು ಹುಡುಕಿರುತ್ತಾನೆ ಹೆಂಡತಿ ಬೈಯಲು ಇನ್ನೊಬ್ಬನನ್ನು ಸೈಡಿಗೆ ಇಟ್ಟಿರುತ್ತಾಳೆ ಇವನು ಹೊರಗೆ ಹೋದಮೇಲೆ ಫೊಕನನಲ್ಲಿ ಅವನಿಗೆ ಇವಳು ಬೈಯುವುದು.ಹೊರಗೆ ಹೋದವನು ಅವಳ ಬಳಿ ಬೈಸಿಕೊಳ್ಳಲು ಇವನು ಹೋಗುವುದು ಟೋಟಲಿ ಗಂಡು ಹೆಣ್ಣಿನ ಸಂಬಂಧ ಅಂದ್ರೆ ಜಗಳ 

ಇರಲಿ ಬಿಡಿ ಜಗಳ ಆದರೆ ಅದು ಉಂಡು ಮಲಗಿದ ಮೇಲೂ ಅಗುವ ಜಗಳ ಸಂಸಾರ ನಾಶಕ್ಕೆ ದಾರಿಯಾಗುತ್ತದೆ.ಜಗಳ ಬಂದಾಗ ಇಬ್ಬರಲ್ಲಿ ಯಾರಾದರೊಬ್ಬರು ಸೈಲೆಂಟ್ ಆಗಿಬಿಡಬೇಕು ಅವಳು ಅಥವಾ ಅವನು ಮಾತನಾಡದೇ ಮೌನವಾಗಬೇಕು ತಾನು ಎಲ್ಲಿ ತಪ್ಪು ಮಾಡಿದೆ ಎಂದು ಅರಿತು ತಿದ್ದಿಕೊಂಡು ಮುನ್ನಡೆಯಬೇಕು ಅವನು ಅವಳಲ್ಲಿ ಕ್ಷಮೆ ಕೇಳಬೇಕು ಅವಳು ಅವನಲ್ಲಿ ಕ್ಷಮೆ ಕೇಳಬೇಕು ಆಗ ಮಾತ್ರ ಸುಖ ಸಂಸಾರ...( ಹಾಗೇ ಸುಮ್ಮನೆ)

ಮಧುನಾಯ್ಕ.ಲಂಬಾಣಿ
ಹೂವಿನ ಹಡಗಲಿ
9611228929

ನೊಂದವಳು(ಸಣ್ಣಕಥೆ) - ಎಂ.‌ಆಶಾಕಿರಣ್

ಈ ಕಥಾನಾಯಕಿಯ ಹೆಸರು ಕುಸುಮ, ಇವಳು ಹಳ್ಳಿಯಲ್ಲಿ ಒಂದು ಬಡಕುಟುಂಬದಲ್ಲಿ ಜನಿಸುತ್ತಾಳೆ. ಇವಳ ತಂದೆಗೆ  ಗಂಡು ಮಗು ಬೇಕೆಂಬ ಹಂಬಲ, ಇದರ ಫಲವಾಗಿ ಇವನಿಗೆ ನಾಲ್ಕು ಹೆಣ್ಣುಮಕ...